ಮಂದಾಳ ಗ್ರಾಮದಲ್ಲಿ ಅನಧಿಕೃತವಾಗಿ ಕಿರಾಣಿ ಅಂಗಡಿಗಳಲ್ಲಿ ಸಾರಾಯಿ ಮಾರಾಟ ಆರೋಪ

ಬಸವಕಲ್ಯಾಣ : ತಾಲೂಕಿನ ಮಂದಾಳ ಗ್ರಾಮದಲ್ಲಿ ಅನಧಿಕೃತವಾಗಿ ಕಿರಾಣಿ ಅಂಗಡಿಗಳಲ್ಲಿ ಸಾರಾಯಿ ಮಾರಾಟ ನಡೆಯುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯದ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಯುವ ಕ್ರಾಂತಿ ಆಗ್ರಹ,

ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದಲ್ಲಿ ರಾಜ್ಯ ಸರ್ಕಾರದ ನಿಯಮಗಳನ್ನು ಸಂಪೂರ್ಣ ಉಲ್ಲಂಘಿಸಿ ಅನಧಿಕೃತವಾಗಿ ಮದ್ಯ/ಸಾರಾಯಿ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿ ಗ್ರಾಮದ ಅನೇಕ ಕಿರಾಣಿ ಅಂಗಡಿಗಳಲ್ಲಿಯೇ ಬಹಿರಂಗವಾಗಿ ಸಾರಾಯಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ಯುವಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ದುಷ್ಪರಿಣಾಮಕ್ಕೆ ಒಳಗಾಗುತ್ತಿದ್ದಾರೆ ಮತ್ತು ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇಂತಹ ಅಕ್ರಮ ಮಾರಾಟ ನಡೆಯುತ್ತಿರುವುದು ಸ್ಥಳೀಯ ಅಧಿಕಾರಿಗಳಿಗೆ ತಿಳಿದಿದ್ದರೂ ಸಹ ಅವರು ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂಬ ಗಂಭೀರ ಅನುಮಾನ ವ್ಯಕ್ತವಾಗುತ್ತಿದೆ. ಇದು ಕರ್ತವ್ಯ ಲೋಪವಾಗಿದ್ದು, ಅಕ್ರಮಕ್ಕೆ ಪರೋಕ್ಷ ಬೆಂಬಲ ನೀಡಿದಂತಾಗಿದೆ.

ಆದ್ದರಿಂದ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಮಬದ್ಧನಾಗಿರುತ್ತಾ ಕಿರಾಣಿ ಅಂಗಡಿಗಳ ಮೇಲೆ ಹಠಾತ್ ದಾಳಿ (Raid) ನಡೆಸಬೇಕು.

ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡುತ್ತಿರುವವರ ವಿರುದ್ಧ ಕಾನೂನು ಪ್ರಕಾರ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಬೇಕು.

ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕು.

ಕರ್ತವ್ಯ ನಿರ್ಲಕ್ಷ್ಯ ತೋರಿದ ಅಬಕಾರಿ ಮತ್ತು ಪೊಲೀಸ್ ಅಧಿಕಾರಿಗಳ ಪಾತ್ರದ ಕುರಿತು ಸ್ವತಂತ್ರ ಇಲಾಖಾ ತನಿಖೆ ನಡೆಸಬೇಕು.

ತನಿಖೆಯ ವರದಿಯನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕು.

ಮುಂದೆಯೂ ಇಂತಹ ಅಕ್ರಮ ನಡೆಯದಂತೆ ನಿರಂತರ ಪರಿಶೀಲನೆ ನಡೆಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು.

ಈ ದೂರಿನ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿದ್ದಲ್ಲಿ, ಮೇಲಾಧಿಕಾರಿಗಳಿಗೆ ಹಾಗೂ ಸಂಬಂಧಿತ ಕಾನೂನು ವೇದಿಕೆಗಳ ಮುಂದೆ ದೂರು ಸಲ್ಲಿಸಲು ಜಿಲ್ಲಾ ಅಬಕಾರಿ ಅಧಿಕಾರಿಗಳಿಗೆ ಯುವ ಕ್ರಾಂತಿ ಸಂಘಟನೆ ಕಾರ್ಯಕರ್ತರು ಮನವಿ ಪತ್ರ ಸಲ್ಲಿಸಿದರು.

error: Content is protected !!