ಪರಿಸರ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಅರಣಕಲ್

ಚಿತ್ತಾಪುರ: ನಾವು ಪರಿಸರವನ್ನು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ ಎಂಬುದನ್ನು ನಾವು ಮರೆಯಬಾರದು. ಪರಿಸರ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಬೇಕು ಎಂದು ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಅಧ್ಯಕ್ಷ ದೇವಿಂದ್ರ ಅರಣಕಲ್ ಹೇಳಿದರು.

ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ವತಿಯಿಂದ ಸೋಮವಾರ ಕಚೇರಿ ಹತ್ತಿರ ಹಮ್ಮಿಕೊಂಡಿದ್ದ ಕೇಂದ್ರ ಸಹಕಾರ ಸಚಿವಾಲಯ 5 ವರ್ಷ ಪೂರೈಸುತ್ತಿರುವ ನಿಮಿತ್ತ ಸಹಕಾರ ಸಪ್ತಾಹ ಆಚರಣೆ, ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಹಕಾರ ಸಪ್ತಾಹದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪರಿಸರ ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಪಿಎಲ್’ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಆರೋಗ್ಯಕರ ಬದುಕನ್ನು ನಡೆಸಲು ಉತ್ತಮ ಜೀವನ ಸ್ವಚ್ಚ ಹಾಗೂ ಉತ್ತಮ ಪರಿಸರ ಅತಿ ಅಗತ್ಯವಾಗಿದ್ದೆ. ಅದಕ್ಕಾಗಿ ನಾವೆಲ್ಲರೂ ಮರ ಗಿಡಗಳನ್ನು ಹೆಚ್ಚು ಹೆಚ್ಚಾಗಿ ಬೆಳೆಸುವ ಮೂಲಕ ಪ್ರಕೃತಿಗೆ ನಮ್ಮ ಕೊಡುಗೆ ನೀಡಬೇಕು ಆಗಾ ಮಾತ್ರ ಉತ್ತಮವಾಗಿರಲ್ಲೂ ಸಾಧ್ಯ ಇದೆ ಎಂದು ಹೇಳಿದರು.

ಕೃಷಿ ಸಹಾಯಕ ನಿರ್ದೇಶಕ ಸಂಜೀವಕುಮಾರ ಮಾನಕರೆ ಮಾತನಾಡಿದರು.
ಈಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಅಶೋಕ ಹರನಾಳ ವಾಡಿ, ನಿರ್ದೇಶಕ ರಾಚಣ್ಣ ಬೊಮ್ಮನಳ್ಳಿ, ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ, ಪುರಸಭೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ, ರೈತ ಸಂಘದ ಅಧ್ಯಕ್ಷ ಶಾಮರಾಯ ಸಂಗಾವಿ, ಮುಖಂಡರಾದ ಶಿವಮೂರ್ತಿ ಯರಗಲ್, ನಾಗೇಂದ್ರ ಬುರ್ಲಿ, ಬಸವರಾಜ ಚಿನ್ನಮಳ್ಳಿ, ಸಿದ್ದು ಟೈಪಿಸ್ಟ್, ಕಾರ್ಯದರ್ಶಿ ಸಂಗನಬಸವ ಸೇರಿದಂತೆ ಇತರರು ಇದ್ದರು.

error: Content is protected !!