ಹುಕ್ಕೇರಿ ತಹಶೀಲ್ದಾರ್ ಕಚೇರಿಯಲ್ಲೇ ಶುಚಿತ್ವ ವಿಲ್ಲದ ಶೌಚಾಲಯ; ಪ್ರತ್ಯೇಕ ಶೌಚಾಲಯಕ್ಕಾಗಿ ಮಹಿಳೆಯರ ಪರದಾಟ

ಹುಕ್ಕೇರಿ: ಸಾರ್ವಜನಿಕರಿಗೆ ಸ್ವಚ್ಛತೆಯ ಪಾಠ ಹೇಳುವ ಹುಕ್ಕೇರಿ ತಾಲೂಕು ಆಡಳಿತವು ತನ್ನದೇ ಕಚೇರಿಯಲ್ಲಿ ಶೌಚಾಲಯಗಳು ಸಮರ್ಪಕ ನಿರ್ವಹಣೆ ಇಲ್ಲದೆ ರೋಗಗಳ ತಾಣವಾಗಿ ಮಾರ್ಪಾಡಾಗುತ್ತಿದೆಯಾ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ. ಪ್ರತಿ ದಿನ ನೂರಾರು ಸಮಸ್ಯೆ ಹೊತ್ತು ಬರುವ ಹತ್ತಾರು ಗ್ರಾಮಸ್ಥರ ಸಮಸ್ಯೆ ಬಗೆಹರಿಸುವ ತಾಲೂಕು ದಂಡಾಧಿಕಾರಿ ಕಚೇರಿಯಲ್ಲೇ ಶೌಚಕ್ಕಾಗಿ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹುಕ್ಕೇರಿ ತಾಲೂಕಿನ ದಂಡಾಧಿಕಾರಿಗಳ ಕಚೇರಿಯ ಸಾರ್ವಜನಿಕ ಶೌಚಾಲಯಗಳು ಸಮರ್ಪಕ ನಿರ್ವಹಣೆ ಇಲ್ಲದೆ ರೋಗಗಳ ತಾಣವಾಗಿ ಮಾರ್ಪಡುತ್ತಿರುವುದು ತೀವ್ರ ಕಳವಳಕಾರಿ ಸಂಗತಿಯಾಗಿದೆ. ಈ ಕಚೇರಿಯಲ್ಲಿ ಶೌಚಾಲಯಗಳನ್ನು ಸಕಾಲದಲ್ಲಿ ಸ್ವಚ್ಛಗೊಳಿಸದ ಕಾರಣ ಇಡೀ ಆವರಣ ಗಬ್ಬೆದ್ದು ಬರುತ್ತಿದೆ. ಅಸ್ವಚ್ಛತೆಯಿಂದಾಗಿ ಸೊಳ್ಳೆ, ನೊಣಗಳ ಕಾಟ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಸಾರ್ವಜನಿಕರಲ್ಲಿ ಮೂಡಿದೆ.

ಇನ್ನು ಈ ಕಚೇರಿಯಲ್ಲಿ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಇಲ್ಲದೆ ಮಹಿಳಾ ಸಿಬ್ಬಂದಿ ಹಾಗೂ ಸಾರ್ವಜನಿಕ ಮಹಿಳೆಯರು ತೀವ್ರ ಮುಜುಗರ ಅನುಭವಿಸುತ್ತಿದ್ದಾರೆ. ನೂರಾರು ಸಮಸ್ಯೆಗಳಿಗೆ ಸ್ಪಂದಿಸುವ ತಹಶೀಲ್ದಾರ್ ಕಚೇರಿಯ ಸಮಸ್ಯೆಗೆ ಮುಕ್ತಿ ಯಾವಾಗ ಎಂದು ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ. ಇನ್ನಾದರೂ ಅಧಿಕಾರಿಗಳು ಇತ್ತ ಗಮನ ಹರಿಸಿ ಸೂಕ್ತವಾದ ಕ್ರಮ ತೆಗೆದುಕೊಳ್ಳುತ್ತಾರೆಯೇ ಎಂದು ಕಾದು ನೋಡಬೇಕಾಗಿದೆ.

error: Content is protected !!