ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಧರಣಿ ಸತ್ಯಾಗ್ರಹ | ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ | ಸೋನಮ್ ವಾಂಗ್ಚೂಕ ಅವರಿಗೆ ಬೆಂಬಲ

ಬೀದರ: ನಗರದ ಪ್ರವಾಸಿ ಮಂದಿರದ ಹತ್ತಿರ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ನೀಟ್ ಪರೀಕ್ಷೆ ಅಕ್ರಮ ಸೋರಿಕೆ ತಡೆಯುವಲ್ಲಿ ವಿಫಲವಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಪರಿಸರ ಹಾಗೂ ಮಾನವ ಹಕ್ಕುಗಳ ಹೋರಾಟಗಾರ ಸೋನಮ್ ವಾಂಗ್ಚೂಕ ಅವರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲವಾಗಿ ಪದಾಧಿಕಾರಿಗಳು ಧರಣಿ ಸತ್ಯಾಗ್ರಹ ನಡೆಸಿದರು.

ಈ ಕುರಿತು ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದ ಹೋರಾಟಗಾರರು, ದೇಶದಲ್ಲಿ ಪ್ರತಿಯೊಂದು ಪರೀಕ್ಷೆಯೂ ಸೋರಿಕೆಯಾಗುತ್ತಿದೆ, ನೀಟ್ ಪರೀಕ್ಷೆ ಸೋರಿಕೆಯಿಂದ ಸುಮಾರು 20ಕ್ಕೂ ಹೆಚ್ಚು ವಿಧ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಇದಕ್ಕೆ ಯಾರು ಹೊಣೆ, ವಿಧ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿರುವ, ಕೇಂದ್ರ ಸರ್ಕಾರ ನಡೆಯನ್ನು ಖಂಡಿಸಿದರು, ಇದರ ಹೊಣೆಯನ್ನು ಹೊತ್ತು ರಾಜೀನಾಮೆ ನೀಡಬೇಕಾದ ಕೇಂದ್ರ ಸರ್ಕಾರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪರವಾಗಿ ನಿಂದಿರುವುದು ನಾಚಿಕೆಗೇಡಿನ ಸಂಗತಿ ಎಂದರು, ಈ ಕುರಿತು ದೆಹಲಿಯಲ್ಲಿ ಸುಮಾರು 20 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಪರಿಸರ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಸೋನಮ್ ವಾಂಗ್ಚೂಕ ಅವರ ಹೋರಾಟವನ್ನು ಲೆಕ್ಕಿಸದೆ ಸರ್ಕಾರ ಭಂಡತನ ತೋರುತ್ತಿದೆ, ಶಿಕ್ಷಣ ಸಚಿವ ರಾಜೀನಾಮೆ ನೀಡಲೇಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಈ ಹೋರಾಟ ಇನ್ನಷ್ಟು ತೀವ್ರಗೊಳ್ಳುತ್ತದೆ ಹಾಗಾಗಿ ಕೇಂದ್ರ ಸರ್ಕಾರ ಎಚ್ಚೆತುಕ್ಕೊಳಬೇಕೆಂದು ಆಗ್ರಹಿಸಿದರು.

ಈ ಸಂಧರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತನ ಜಿಲ್ಲಾ ಹಾಗೂ ತಾಲ್ಲೂಕು ಪದಾಧಿಕಾರಿಗಳು ಹಾಗೂ ಪ್ರತಿಭಟನೆಗೆ ಬೆಂಬಲವಾಗಿ ದಲಿತ ಸಂಘಟನೆಯ ಮುಖಂಡರು, ವಿದ್ಯಾರ್ಥಿ ಮುಖಂಡರು, ಚಿಂತಕರು ವಿಚಾರವಾದಿಗಳು ಬೆಂಬಲಿಸಿ ಹಾಜರಿದ್ದರು.

error: Content is protected !!