ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಅವರು ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಹಿಂದವಿ ಸ್ವರಾಜ್ಯದ ಸಂಸ್ಥಾಪಕ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೂಢ ಪುತ್ಥಳಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಮಹಾರಾಜರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಶೌರ್ಯ, ಸ್ವಾಭಿಮಾನ, ರಾಷ್ಟ್ರಭಕ್ತಿ ಮತ್ತು ಜನಪರ ಆಡಳಿತದ ಆದರ್ಶಗಳು ಇಂದಿಗೂ ಯುವಜನತೆಗೆ ಸ್ಫೂರ್ತಿದಾಯಕವಾಗಿವೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕೆಂದು ಈ ಸಂದರ್ಭದಲ್ಲಿ ಕರೆ ನೀಡಿದರು
ಈ ಸಂದರ್ಭದಲ್ಲಿ ಗೋವಿಪುರಮ ಗೋಸಾವಿ ಮಹಾಸಂಸ್ಥಾನ ಮಠದ ಪ.ಪೂ. ಶ್ರೀ ಮಂಜುನಾಥ ಮಹಾಸ್ವಾಮಿಗಳು, ಮಾಜಿ ಸಚಿವರಾದ ಸಂತೋಷ ಲಾಡ್, ಶಾಸಕರಾದ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯರಾದ ಪ್ರಕಾಶ ಹುಕ್ಕೇರಿ, ಪದ್ಮ ಡಾ. ಪ್ರಭಾಕರ ಕೋರೆ, ಮಾಜಿ ಸಚಿವರಾದ ಶ್ರೀಮಂತ ಪಾಟೀಲ ಸೇರಿದಂತೆ ಅನೇಕ ಗಣ್ಯರು ಹಾಗೂ ಅಪಾರ ಸಂಖ್ಯೆಯ ಭಕ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
