ಒಂದು ದಿನದ ರಾಜ್ಯ ಮಟ್ಟದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ

ಬೆಳಗಾವಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿ ನಗರದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನಿ., ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ ಉಪವಿಭಾಗದ ಪತ್ತಿನ ಸಹಕಾರ ಸಂಘಗಳು (ಕ್ರೆಡಿಟ್) ಹಾಗೂ ನೌಕರರ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರ ಸರ್ವತೋಮುಖ ಬೆಳವಣಿಗೆಗಾಗಿ ಆಯೋಜಿಸಲಾಗಿದ್ದ ಒಂದು ದಿನದ ರಾಜ್ಯ ಮಟ್ಟದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ಸಹಕಾರ ಕ್ಷೇತ್ರವು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿದೆ. ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರಿಗೆ ಗುಣಮಟ್ಟದ ತರಬೇತಿ, ಸಮರ್ಥ ಆಡಳಿತ, ಪಾರದರ್ಶಕತೆ ಹಾಗೂ ಆಧುನಿಕ ನಿರ್ವಹಣಾ ಕೌಶಲ್ಯಗಳನ್ನು ಒದಗಿಸುವ ಇಂತಹ ಕಾರ್ಯಕ್ರಮಗಳು ಸಹಕಾರ ಸಂಸ್ಥೆಗಳನ್ನು ಇನ್ನಷ್ಟು ಬಲಿಷ್ಠಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ.

ಸಹಕಾರ ಚಳವಳಿಯನ್ನು ಮತ್ತಷ್ಟು ಸದೃಢಗೊಳಿಸಿ, ಸದಸ್ಯರು ಹಾಗೂ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸೋಣ.

ಈ‌ ಸಂದರ್ಭದಲ್ಲಿ ಶ್ರೀ ಬಸಗೌಡ ಡಿ. ಪಾಟೀಲ, ಬಸವರಾಜ ಅರಬಗೊಂಡ, ರವೀಂದ್ರ ಪಾಟೀಲ, ಜಬಿವುಲ್ಲಾ ಸೇರಿ ಬೆಳಗಾವಿ ಜಿಲ್ಲಾ ಸಹಕಾರ ಮಂಡಳದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

error: Content is protected !!