ಹುಕ್ಕೇರಿ: ದಿ ಹುಕ್ಕೇರಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ 2025-26ನೇ ಸಾಲಿನಲ್ಲಿ ಸುಮಾರು ₹1 ಕೋಟಿ 79 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸದಸ್ಯರು, ಗ್ರಾಹಕರು ಹಾಗೂ ಸಿಬ್ಬಂದಿಯ ಸಹಕಾರದಿಂದ ಬ್ಯಾಂಕ್ ಪ್ರಗತಿಯತ್ತ ಸಾಗುತ್ತಿದೆ ಎಂದು ಬ್ಯಾಂಕಿನ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹೇಳಿದರು.
ಹುಕ್ಕೇರಿ ಪಟ್ಟಣದ ಸಿ.ಎಸ್. ತುಬಚಿ ಶಿಕ್ಷಣ ಸಂಸ್ಥೆಯ ಚಿಣ್ಣರ ಭವನದಲ್ಲಿ ನಡೆದ ಬ್ಯಾಂಕಿನ 98ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಆರಂಭದಲ್ಲಿ ಸಸಿಗೆ ನೀರುಣಿಸುವ ಮೂಲಕ ಸಭೆಗೆ ಚಾಲನೆ ನೀಡಲಾಯಿತು. ಬ್ಯಾಂಕಿನ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಸುದೀರ್ಘ 52 ವರ್ಷಗಳ ಕಾಲ ಸೇವೆ ಸಲ್ಲಿಸಿ ಬ್ಯಾಂಕಿನ ಅಭಿವೃದ್ಧಿಗೆ ಕಾರಣಕರ್ತರಾಗಿದ್ದ ಬಸ್ತವಾಡ ಗ್ರಾಮದ ಲಿಂಗೈಕ್ಯ ಚನ್ನಗೌಡ ಬ. ಪಾಟೀಲ ಅವರ ಸ್ಮರಣಾರ್ಥ ಮೌನಾಚರಣೆ ನಡೆಸಿ ಗೌರವ ಸಲ್ಲಿಸಲಾಯಿತು.
ನಂತರ ಮಾತನಾಡಿದ ಅಧ್ಯಕ್ಷ ಚಂದ್ರಶೇಖರ ಪಾಟೀಲ, ಹಿರಿಯರು ಹಾಕಿಕೊಟ್ಟ ಆಚಾರ-ವಿಚಾರ ಹಾಗೂ ಸನ್ಮಾರ್ಗದ ಮೂಲಕ ಆಡಳಿತವನ್ನು ಮುಂದುವರಿಸಿಕೊಂಡು ಬರುತ್ತಿದ್ದೇವೆ. ಸದಸ್ಯರು ಮತ್ತು ಗ್ರಾಹಕರ ಸಹಕಾರ ಹಾಗೂ ಸಿಬ್ಬಂದಿಯ ಪರಿಶ್ರಮದಿಂದ ಬ್ಯಾಂಕ್ ಪ್ರಗತಿ ಪಥದಲ್ಲಿ ಮುನ್ನಡೆಯುತ್ತಿದೆ. ಸದಸ್ಯರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಸಾಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸದಸ್ಯರು ಪಡೆದ ಸಾಲದ ಕಂತು ಹಾಗೂ ಬಡ್ಡಿಯನ್ನು ನಿಗದಿತ ಸಮಯಕ್ಕೆ ಪಾವತಿಸುವ ಮೂಲಕ ಬ್ಯಾಂಕಿನ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಬ್ಯಾಂಕಿನ ಪ್ರಭಾರ ಪ್ರಧಾನ ವ್ಯವಸ್ಥಾಪಕ ಕೆ.ಬಿ. ಬಂದಾಯಿ ಅವರು ಸರ್ವ ಸದಸ್ಯರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಬ್ಯಾಂಕಿನ ವಾರ್ಷಿಕ ವರದಿಯನ್ನು ಮಂಡಿಸಿದರು.
ಸಭೆಯಲ್ಲಿ ಸದಸ್ಯರ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ ಪ್ರಶಸ್ತಿ ಪತ್ರ ಹಾಗೂ ಸವಿ ನೆನಪಿನ ಕಾಣಿಕೆ ನೀಡಿ ಸತ್ಕರಿಸಲಾಯಿತು. ಈ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಾಯಿತು. ಇದೇ ಸಂದರ್ಭದಲ್ಲಿ ಕೆಲವು ಸದಸ್ಯರು ಆಡಳಿತ ಮಂಡಳಿಯೊಂದಿಗೆ ಸಂವಾದ ನಡೆಸಿ ಬ್ಯಾಂಕಿಗೆ
ವರದಿ : ಸದಾನಂದ ಎಂ
