ಕಲಬುರಗಿ ಸೆ.4-ಜಿಲ್ಲೆಯ ಕಾಳಗಿ ತಾಲೂಕಿನ ಕೆಂದ್ರಸ್ಥಾನದಲ್ಲಿ ಕಾಳಗಿ ವಕೀಲರ ಸಂಘ ಹಾಗೂ ಜಿಲ್ಲಾ ನ್ಯಾಯಾಂಗ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನೂತನ ಸಿವಿಲ್-ಜೆ. ಎಂ.ಎಫ್.ಸಿ ನ್ಯಾಯಾಲಯ ಉದ್ಘಾಟನಾ ಸಮಾರಂಭವನ್ನು ಸೆ.5 ರಂದು ಶನಿವಾರ ಬೆಳಿಗ್ಗೆ 10:45ಗೆ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮ ಉದ್ಘಾಟನೆ ನಂತರ ಪಟ್ಟಣದ ನೀಲಕಂಠ ಕಾಳೇಶ್ವರ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಕಾಳಗಿ ವಕೀಲರ ಸಂಘದ ಅಧ್ಯಕ್ಷರು
ಡಿ.ಎಸ್ ನಾಮದಾರ ಹಾಗೂ ಮಾಜಿ ಶಾಸಕ ವಿಶ್ವನಾಥ ಹೆಬ್ಬಾಳ ಅವರು ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಶಿವಶಂಕರ ಅಮರಣ್ಣನ್ನವರ ಉದ್ಘಾಟಿಸುವರು. ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆ ವಹಿಸುವರು. ವಿಶೇಷ ಅಥಿತಿಗಳಾಗಿ ಚಿಂಚೋಳಿ ಮತಕ್ಷೇತ್ರ ಶಾಸಕರಾದ ಅವಿನಾಶ ಉಮೇಶ ಜಾಧವ್, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಬಿಜಿ. ಪಾಟೀಲ ಆಗಮಿಸುವರು.
ಕಾಳಗಿ ವಕೀಲರ ಸಂಘದ ಅಧ್ಯಕ್ಷ ಡಿ.ಎಸ್ ನಾಮದಾರ, ಪ್ರಧಾನ ನ್ಯಾಯಾಧೀಶರಾದ ಜಿ.ಎಲ್. ಲಕ್ಷ್ಮೀನಾರಾಯಣ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಜರುಗಲಿರುವ ಪ್ರಯುಕ್ತ ಸಮಸ್ತ ಕಾಳಗಿ ತಾಲೂಕಿನ ಗಣ್ಯರು, ಸಾರ್ವಜನಿಕರು, ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೋಳಿಸಬೇಕು ಎಂದು ಮಾಜಿ ಶಾಸಕ ವಿಶ್ವನಾಥ ಹೆಬ್ಬಾಳ ಹಾಗೂ ಕಾಳಗಿ ವಕೀಲರ ಸಂಘದ ಅಧ್ಯಕ್ಷ ಡಿ.ಎಸ್.ನಾಮದಾರ ಪ್ರಕಟಣೆಯಲ್ಲಿಕೋರಿದ್ದಾರೆ.
ವರದಿ ರಮೇಶ್ ಎಸ್ ಕುಡಹಳ್ಳಿ
