ಗೋಕಾಕ: ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು. ಪ್ರಿಯಾಂಕಾ ಜಾರಕಿಹೊಳಿ ಅವರು ಗೋಕಾಕ ತಾಲೂಕಿನ ನಲ್ಲಾನಟ್ಟಿ ಗ್ರಾಮದಲ್ಲಿ ನಡೆದ ಕೈ. ವಾ. ಶ್ರೀ ಕಾಮಪ್ಪ ಯಲ್ಲಪ್ಪ ಕುಳ್ಳೂರ ಅವರ ನೂತನ ಮಂಟಪ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ನೆರವೇರಿಸಿದರು.
ಚಿತ್ರದುರ್ಗದ ಶ್ರೀಮದ್ ಜಗದ್ಗುರು ಚಿನ್ಮೂಲಾದ್ರಿ ಶಿಲಾಪುರಿ ಸೂರ್ಯಸಿಂಹಾಸನ ಭಗೀರಥ ಪೀಠ ಮಹಾಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ. ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಂಟಪ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕಟಕಭಾಂವಿ ಶ್ರೀ ಜಕ್ಕಮ್ಮ ಹಾಗೂ ಶ್ರೀ ಧರೇಶ್ವರ ಪುಣ್ಯಾಶ್ರಮದ ಪೂಜ್ಯ ಶ್ರೀ ಶ್ರೀ ಅಭಿನವ ಧರೇಶ್ವರ ಮಹಾಸ್ವಾಮೀಜಿಯವರು, ಯುವ ಮುಖಂಡರಾದ ಶ್ರೀ ಸರ್ವೋತ್ತಮ ಜಾರಕಿಹೊಳಿ ಸೇರಿದಂತೆ ಕುಳ್ಳೂರ ಕುಟುಂಬದ ಸದಸ್ಯರು, ಗ್ರಾಮದ ಹಿರಿಯರು ಹಾಗೂ ಭಕ್ತರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧಾರ್ಮಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
