ಬಸವಕಲ್ಯಾಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ; ಮಾಜಿ ವಿಧಾನ ಪರಿಷತ್ ಸದಸ್ಯ ವಿಜಯ್ ಸಿಂಗ್ ಭಾಗಿ

ಬಸವಕಲ್ಯಾಣ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ವಿಜಯ್ ಸಿಂಗ್ ಅವರು ಭಾಗವಹಿಸಿ ಶಿಕ್ಷಕರಿಗೆ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶಿಕ್ಷಕರ ಸೇವೆ, ತ್ಯಾಗ ಹಾಗೂ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಅವರು ವಹಿಸುವ ಮಹತ್ವದ ಪಾತ್ರವನ್ನು ಸ್ಮರಿಸಿದರು.

ಶಿಕ್ಷಕರು ಸಮಾಜದ ನಿಜವಾದ ನಿರ್ಮಾತೃಗಳಾಗಿದ್ದು, ಅವರ ಜ್ಞಾನ, ಮಾರ್ಗದರ್ಶನ ಹಾಗೂ ಮೌಲ್ಯಯುತ ಬೋಧನೆಯಿಂದ ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ನರ್ಸಿಂಗ್ ರೆಡ್ಡಿ, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

error: Content is protected !!