ಹುಕ್ಕೇರಿಯಲ್ಲಿ ನೂತನ ತಲಾಟಿಗಳ ಕಾರ್ಯವೈಖರಿಗೆ ಸಾರ್ವಜನಿಕರ ಅಸಮಾಧಾನ!

ಹುಕ್ಕೇರಿ: ತಾಲೂಕಿನಲ್ಲಿ ಇತ್ತೀಚೆಗೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಕೆಲ ನೂತನ ತಲಾಟಿಗಳ ಕಾರ್ಯವೈಖರಿ ಕುರಿತು ಸಾರ್ವಜನಿಕರಿಂದ ಅಸಮಾಧಾನದ ಮಾತುಗಳು ಕೇಳಿಬರುತ್ತಿವೆ.

ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಕೆಲಸಗಳಿಗಾಗಿ ಗ್ರಾಮೀಣ ಭಾಗದ ಜನರು ತಲಾಟ ಕಚೇರಿಗಳಿಗೆ ಭೇಟಿ ನೀಡುತ್ತಿದ್ದು, ಅಗತ್ಯ ದಾಖಲೆಗಳು, ಪ್ರಮಾಣಪತ್ರಗಳು ಹಾಗೂ ಕಂದಾಯ ಸೇವೆಗಳಿಗೆ ಸಂಬಂಧಿಸಿದ ಕೆಲಸಗಳಲ್ಲಿ ವಿಳಂಬವಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಸರ್ಕಾರಿ ಸೇವೆಗಳು ಜನರಿಗೆ ಸುಲಭವಾಗಿ ಹಾಗೂ ಸಮಯಕ್ಕೆ ಸರಿಯಾಗಿ ದೊರೆಯಬೇಕಾದರೂ, ಕೆಲ ಗ್ರಾಮಗಳಲ್ಲಿ ಅಧಿಕಾರಿಗಳ ಲಭ್ಯತೆ ಮತ್ತು ಸಾರ್ವಜನಿಕರೊಂದಿಗೆ ಸ್ಪಂದಿಸುವ ವಿಚಾರದಲ್ಲಿ ಸಮಸ್ಯೆಯಾಗುತ್ತಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.

ನೂತನವಾಗಿ ನಿಯೋಜನೆಗೊಂಡಿರುವ ತಲಾಟಿಗಳ ಕಾರ್ಯವೈಖರಿ ಕುರಿತು ತಾಲೂಕು ಆಡಳಿತ ಪರಿಶೀಲನೆ ನಡೆಸಿ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

ವರದಿ : ಸದಾನಂದ ಎಂ

error: Content is protected !!