ಧರ್ಮಸ್ಥಳ ಸಂಘದಿಂದ ಗುಡಸ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ 3 ಲಕ್ಷ ಅನುದಾನ ಬಿಡುಗಡೆ

ಶಿರಗಾಂವ: ಶಿರಗಾಂವ ವಲಯದ ಗುಡಸ ಗ್ರಾಮದಲ್ಲಿರುವ ಐತಿಹಾಸಿಕ ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಅಭಿವೃದ್ಧಿ ಕಾರ್ಯಕ್ಕಾಗಿ ಕ್ಷೇತ್ರದ ವತಿಯಿಂದ 3,00,000 ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.

ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನುದಾನದ ಡಿಡಿಯನ್ನು ಜಿಲ್ಲಾ ನಿರ್ದೇಶಕರಾದ ಶ್ರೀ ಸುರೇಂದ್ರ ಸರ್ ಅವರು ದೇವಸ್ಥಾನ ಸಮಿತಿಗೆ ವಿತರಿಸಿದರು. ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿಗಳಾದ ಶ್ರೀಕಾಂತ ನಾಯ್ಕ ಸರ್, ಶಿರಗಾಂವ ವಲಯದ ಮೇಲ್ವಿಚಾರಕರಾದ ರಮೇಶ್ ಸರ್, ದೇವಸ್ಥಾನ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಈ ಅನುದಾನದಿಂದ ದೇವಸ್ಥಾನದ ಮೂಲ ಸೌಕರ್ಯ ಅಭಿವೃದ್ಧಿ, ದುರಸ್ತಿ ಕಾರ್ಯ ಹಾಗೂ ಭಕ್ತಾದಿಗಳಿಗೆ ಅನುಕೂಲವಾಗುವಂತಹ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಸಮಿತಿ ಪದಾಧಿಕಾರಿಗಳು ತಿಳಿಸಿದರು. ಧರ್ಮಸ್ಥಳದ ಕ್ಷೇತ್ರದ ವತಿಯಿಂದ ದೇವಸ್ಥಾನದ ಅಭಿವೃದ್ಧಿಗೆ ನೆರವು ನೀಡುತ್ತಿರುವುದಕ್ಕೆ ಅವರು ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಧರ್ಮಸ್ಥಳ ಸಂಘದ ಸದಸ್ಯರು, ಸ್ಥಳೀಯ ಸೇವಾ ಪ್ರತಿನಿಧಿಗಳಾದ ಶೈಲಾ, ಅಶ್ವಿನಿ, ಮೇಲ್ವಿಚಾರಕರು, ಗ್ರಾಮದ ಗಣ್ಯರು, ಬಸವೇಶ್ವರ ಸದ್ಭಕ್ತ ಸೇವಾ ಮಂಡಳಿಯ ಪದಾಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

error: Content is protected !!