ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಪರ ಪ್ರಚಾರ ಸಭೆ

ಧಾರವಾಡ: ಧಾರವಾಡದ ಖಾಸಗಿ ಹೋಟೆಲ್‌ನಲ್ಲಿ ವಿಧಾನ ಪರಿಷತ್‌ನ ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರ ಚುನಾವಣಾ ಪ್ರಚಾರಾರ್ಥ ಸಭೆ ನಡೆಯಿತು.

ಈ ಸಭೆಯಲ್ಲಿ ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಸತೀಶ್ ಅಣ್ಣಾ ಜಾರಕಿಹೊಳಿ ಅವರು, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಭಾಗವಹಿಸಿದ್ದರು.

ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರ ಗೆಲುವಿಗಾಗಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಪದವೀಧರ ಮತದಾರರನ್ನು ತಲುಪುವುದು ಹಾಗೂ ಚುನಾವಣಾ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಲಾಯಿತು.

ಈ ಸಭೆಯಲ್ಲಿ ಸಚಿವರಾದ ಸಂತೋಷ್ ಲಾಡ್, ಲಕ್ಷ್ಮಣ ಸವದಿ, ರುದ್ರಪ್ಪ ಲಮಾಣಿ, ಮಾಜಿ ಸಚಿವರಾದ ಎಚ್.ಕೆ. ಪಾಟೀಲ್, ಶಾಸಕರಾದ,.ಪ್ರಸಾದ್ ಅಬ್ಬಯ್ಯ, ಎನ್.ಹೆಚ್. ಕೋನರಡ್ಡಿ ಸೇರಿದಂತೆ ಗದಗ, ಬೆಳಗಾವಿ, ಹಾವೇರಿ, ಧಾರವಾಡ ಜಿಲ್ಲೆಗಳ ಶಾಸಕರು, ಮಾಜಿ ಸಚಿವರು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಪಕ್ಷದ ಮುಖಂಡರು, ವಿವಿಧ ನಿಗಮಗಳ ಅಧ್ಯಕ್ಷರು ಉಪಸ್ಥಿತರಿದ್ದರು.

error: Content is protected !!