ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ

ಬೆಂಗಳೂರು: ಇಂದು ರಾಜಭವನದಲ್ಲಿ ಕರ್ನಾಟಕದ ರಾಜ್ಯಪಾಲರಾದ Dr. Sudha Yadav ಅವರನ್ನು ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಅವರು ಭೇಟಿ ಮಾಡಿ ಅಭಿನಂದಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ ರಾಜ್ಯದ ಹಾಗೂ ಬೀದರ್ ಲೋಕಸಭಾ ಕ್ಷೇತ್ರದ ಪ್ರಮುಖ ಅಭಿವೃದ್ಧಿ ಕಾರ್ಯಗಳು, ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಿದ್ಯಮಾನಗಳು ಹಾಗೂ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳ ಕುರಿತು ಸುದೀರ್ಘವಾಗಿ ಚರ್ಚಿಸಿ, ಸಮಾಲೋಚನೆ ನಡೆಸಿದರು.

ತಮ್ಮ ಭಾಗದ ಜನರ ಆಶೋತ್ತರಗಳನ್ನು ರಾಜ್ಯಪಾಲರ ಗಮನಕ್ಕೆ ತರಲಾಗಿದ್ದು, ಜಿಲ್ಲೆಯ ಸರ್ವತೋಮುಖ ಪ್ರಗತಿಗೆ ಸದಾ ಶ್ರಮಿಸುವ ನಿಟ್ಟಿನಲ್ಲಿ ಈ ಭೇಟಿಯು ಅತ್ಯಂತ ಸಕಾರಾತ್ಮಕವಾಗಿ ಮೂಡಿಬಂದಿದೆ ಎಂದು ಅವರು ತಿಳಿಸಿದ್ದಾರೆ.

error: Content is protected !!