ಕಾಳಗಿ: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕ್ರಮ ನವಂಬರ್ . 17ರಂದು ಶ್ರೀ ನೀಲಕಂಠ ಕಾಳೇಶ್ವರ ದೇವಸ್ಥಾನದಲ್ಲಿ ನಡೆಯುವ ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಾರ್ಯಕ್ರಮ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವಂತೆ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಸಂತೋಷ ಕುಡಹಳ್ಳಿ ಕರೆ ನೀಡಿದರು.
ಈ ಕುರಿತು ಪತ್ರಿಕೆ ಪ್ರಕಟಣೆ ಹೊರಡಿಸಿದ ಅವರು, ತಾಲೂಕು ಮಟ್ಟದ ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಕಲಾವಿದರು ಗಣಪತಿರಾವ್ ಸಿಂಗಶೆಟ್ಟಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಗಣಪತಿರಾವ್ ಸಿಂಗಶೆಟ್ಟಿ ಅವರು ಜಿಲ್ಲೆಯಲ್ಲಿ ಸುಮಾರು ಮೂರು ದಶಕಗಳಿಂದ ಸಂಗೀತ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಂಗೀತ ಮತ್ತು ಸಾಹಿತ್ಯ ಅವರ ಸೇವೆ ಅನನ್ಯ ಎಂದು ಶ್ಲಾಘಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು, ಕನ್ನಡಾಭಿಮಾನಿಗಳು, ಸಾಹಿತ್ಯ ಪ್ರಿಯರು, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದರು.
