ರಾಯಬಾಗದಲ್ಲಿ ಸಂವಿಧಾನ ಜಾಗೃತಿ ಸಮಾವೇಶ – ಹುಕ್ಕೇರಿಯಲ್ಲಿ ಪೂರ್ವಭಾವಿ ಸಭೆ

ಹುಕ್ಕೇರಿ : ದಲಿತ ಸಂಘರ್ಷ ಸಮಿತಿ ಭೀಮಮಾರ್ಗ ಇವರ ನೇತೃತ್ವದಲ್ಲಿ ನಡೆಯಲಿರುವ ಸಂವಿಧಾನ ದಿನಾಚರಣೆ ಅಂಗವಾಗಿ ರಾಯಬಾಗದಲ್ಲಿ ಸಂವಿಧಾನ ಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಮಾವೇಶದ ಯಶಸ್ಸಿಗಾಗಿ ಹುಕ್ಕೇರಿ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಸಮಾವೇಶದ ಸಿದ್ಧತೆ, ಸಂಘಟನೆ ಹಾಗೂ ಕಾರ್ಯಕರ್ತರ ಜವಾಬ್ದಾರಿಗಳ ಕುರಿತು ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಸಂವಿಧಾನದ ಮಹತ್ವ, ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಹಾಗೂ ಸಂವಿಧಾನ ಜಾಗೃತಿಯ ಅಗತ್ಯತೆಯ ಕುರಿತು ಸಭೆಯಲ್ಲಿ ಮಾತನಾಡಲಾಯಿತು.

ಈ ಸಭೆಯಲ್ಲಿ ಸುಮಾರು 100 ರಿಂದ 150 ಜನರನ್ನು ರಾಯಬಾಗ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತೀರ್ಮಾನಿಸಲಾಯಿತು. ಅದಕ್ಕಾಗಿ ಪ್ರತಿ ಗ್ರಾಮ ಹಾಗೂ ತಾಲೂಕು ಮಟ್ಟದಲ್ಲಿ ಕಾರ್ಯಕರ್ತರು ಪ್ರಚಾರ ಹಾಗೂ ಸಂಘಟನೆ ಮಾಡಬೇಕೆಂದು ಸೂಚಿಸಲಾಯಿತು.

ರಾಯಬಾಗದಲ್ಲಿ ನಡೆಯಲಿರುವ ಸಂವಿಧಾನ ಜಾಗೃತಿ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸಭೆಯಲ್ಲಿ ಮನವಿ ಮಾಡಲಾಯಿತು.

error: Content is protected !!