ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸಿ ಪ್ರಗತಿ ಪರಿಶೀಲನಾ ಸಭೆ

 

ಅಧ್ಯಕ್ಷ ಶಾನೋಲ ತಶೀಲ್ದಾರ್ ತಾಕೀತು ಹುಕ್ಕೇರಿ ತಾಲೂಕಿನಾದ್ಯಂತ ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ತಾಲೂಕ ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷ ಶಾನೂಲ ತಹಶೀಲ್ದಾರ್ ಸೂಚಿಸಿದರು. ಇಲ್ಲಿನ ಪೂರ್ವಸಭೆ ಸಭಾಭವನದಲ್ಲಿ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸರಕಾರದ ಗ್ಯಾರಂಟಿ ಯೋಜನೆಗಳ ಪರವಾಗಿ ರಾಜ್ಯಾದ್ಯಂತ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ ಎಂದರು. ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ವಿದ್ಯಾರ್ಥಿಗಳಿಗೆ ಗ್ರಹಣೀಯರಿಗೆ ವಿದ್ಯುತ್ ಗ್ರಾಹಕರಿಗೆ ಹಾಗೂ ಯುವಕರಿಗೆ ಸೇರಿದಂತೆ ಸಮಾಜದ ಪ್ರತಿಯೊಬ್ಬರಿಗೆ ಅನುಕೂಲವಾಗುತ್ತಿದೆ ಗ್ಯಾರಂಟಿ ಯೋಜನೆಯು ಪಕ್ಷಾತೀತವಾಗಿ ಹಾಗೂ ಜನಪರ ಉಳ್ಳ ಸಾಮಾಜಿಕ ಕಾರ್ಯಕ್ರಮವಾಗಿ ದೆ ಸಾರ್ವಜನಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಇದರ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಅವರು . ಪುರಸಭೆ ನೂತನ ಅಧ್ಯಕ್ಷ ಇಮ್ರಾನ್ ಮೋಮಿನ ಮಾತನಾಡಿ ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರು ನೆಮ್ಮದಿ ಜೀವನ ಕಳೆಯುತ್ತಿದ್ದಾರೆ ಈ ಯೋಜನೆಯಿಂದ ಹೊರಗೂಳಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅಂಥವರನ್ನು ನೋಂದಣಿ ಮಾಡಿಕೊಳ್ಳಬೇಕು ಈ ನಿಟ್ಟಿನಲ್ಲಿ ತಾಲೂಕಿನ ಅಧಿಕಾರಿ ಸಿಬ್ಬಂದಿಗಳು ಪ್ರಾಮಾಣಿಕ ಮತ್ತು ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು. ಇದೇ ವೇಳೆ ವಿವಿಧ ಹಳ್ಳಿಗಳಿಂದ ಆಗಮಿಸಿದ ಗ್ಯಾರಂಟಿ ಯೋಜನೆಗಳ ಅಹವಾಲು ಆಲಿಸಿ ಸ್ಥಳದಲ್ಲಿಯೇ ಪರಿಹರಿಸುವಂತೆ ಸಂಬಂಧಿಸಿದವರಿಗೆ ಸೂಚಿಸಿದರು. ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಟಿ ಆರ್ ಮಲ್ಲಾಡದ. ಯೋಜನಾಧಿಕಾರಿ ಪ್ರಶಾಂತ್ ಮುನ್ನೋಳಿ. ಪುರಸಭೆ ಮುಖ್ಯ ಅಧಿಕಾರಿ ಈಶ್ವರ್ . ಸಮಿತಿಯ ಸದಸ್ಯರಾದ ಶ್ರೀನಿವಾಸ ವ್ಯಾಪಾರಿ ಅಣ್ಣೇಗೌಡ ಪಾಟೀಲ್. ಸುಭಾಷ್ ನಾಯಿಕ . ಆನಂದ್ ಖಾತೆದಾರ್. ಶಾಂತಿನಾಥ ಮಗದುಮ್ಮ. ಸಂಗೀತ ಮಾದರ್ .ಗೋದವ್ವ ಅಗಸರ .ಯುವ ಮುಖಂಡ ಸತೀಶ್ ದಿನ್ನಿಮನಿ. ಮತ್ತಿತರು ಉಪಸ್ಥಿತರಿದ್ದರು.

 

ವರದಿ : ಸದಾನಂದ