ಬೆಳಗಾವಿ ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಪೌರಾಡಳಿತ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಅಂಗವಾಗಿ ಹಮ್ಮಿಕೊಂಡಿದ್ದ “ಸಂವಿಧಾನ ಜಾಗೃತಿ ಜಾಥಾ” ಸ್ತಭ್ಧಚಿತ್ರ ಮೆರವಣಿಗೆ ಹಾಗೂ ಐಕ್ಯತಾ ಸಮಾವೇಶದಲ್ಲಿ ಪಾಲ್ಗೊಂಡು, ಶ್ರದ್ಧಾಪೂರ್ವಕವಾಗಿ ಭಾರತೀಯ ಸಂವಿಧಾನ ಪೀಠಿಕೆಯನ್ನು ಓದುವ ಮೂಲಕ ಅಂತರಾಷ್ಟ್ರಿಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ನೆರವೇರಿಸಿದರು
ಈ ಸಂದರ್ಭದಲ್ಲಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೇಬಾಳ್ಕರ ಶಾಸಕರುಗಳಾದ ಶ್ರೀ ಆಸೀಫ್ ರಾಜು ಸೇಠ್, ಶ್ರೀ ವಿಠ್ಠಲ ಹಲಗೇಕರ್, ಜಿಲ್ಲಾಧಿಕಾರಿಗಳಾದ ಶ್ರೀ ಮೊಹಮ್ಮದ್ ರೋಷನ್, ಬುಡಾ ಅಧ್ಯಕ್ಷರಾದ ಶ್ರೀ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾ ಪಂಚಾಯತ್ CEOಗಳಾದ ಶ್ರೀ ರಾಹುಲ್ ಶಿಂಧೆ, ಬೆಳಗಾವಿ ಎಸ್.ಪಿಗಳಾದ ಶ್ರೀ ಭೀಮಾಶಂಕರ ಗುಳೇದ್, ಪೊಲೀಸ್ ಕಮಿಷನರಾದ ಶ್ರೀ ಯಡಾ ಮಾರ್ಟಿನ್ ಮಾರ್ಬನಾಂಗ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ ಸದಾನಂದ್ ಎಂ ಹೆಚ್