ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ.), ಬೆಂಗಳೂರು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕು ಘಟಕ ರಾಮದುರ್ಗ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ ಮತ್ತು ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಹಾಗೂ ಕವಿಗೋಷ್ಠಿ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟಿನೆ ಮಾಡಲಾಯಿತು.
ಶಿಕ್ಷಕರು ಮಕ್ಕಳಲ್ಲಿ ವೈಚಾರಿಕ ಹಾಗೂ ವೈಜ್ಞಾನಿಕ ಮನೋಭಾವ ಬಿತ್ತಬೇಕಿದೆ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್ ಉಪ್ಪಾರ್* ಹಾಸನ : ಶಿಕ್ಷಕರಾದ ನಮಗೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಜವಾಬ್ದಾರಿ ಇದೆ. ಆದ್ದರಿಂದ ಮಕ್ಕಳಿಗೆ ಕೇವಲ ಪಠ್ಯ ಬೋಧನೆ ಮಾಡುವವರ ಜೊತೆಗೆ ಅವರಲ್ಲಿ ವೈಚಾರಿಕ ಹಾಗೂ ವೈಜ್ಞಾನಿಕ ಮನೋಭಾವ ಬಿತ್ತಬೇಕಿದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್ ಉಪ್ಪಾರ್ ಅಭಿಪ್ರಾಯಪಟ್ಟರು.
ಪಾದರಸ ವ್ಯಕ್ತಿತ್ವದಂತಹ ಬಿ.ಯು.ಭೈರಕದಾರ ನೇತೃತ್ವದಲ್ಲಿ ರಾಮದುರ್ಗ ತಾಲ್ಲೂಕು ಘಟಕ ಈಗಾಗಲೇ ಸಾಕಷ್ಟು ಮೌಲ್ಯಭರಿತ ಕಾರ್ಯಕ್ರಮಗಳನ್ನು ಯಶಸ್ವೀಯಾಗಿ ಹಮ್ಮಿಕೊಂಡು ಬಂದಿದ್ದು ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ ಹಾಗೂ ಭಾರತ ರತ್ನ ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ ಹೆಸರಿನಲ್ಲಿ ಒಂಭತ್ತು ಶಿಕ್ಷಕ ಹಾಘೂ ಶಿಕ್ಷಕಿಯರನ್ನು ಯಾವುದೇ ಅರ್ಜಿಬಯಸದೇ ನೇರವಾಗಿ ಗುಣಾತ್ಮಕತೆಯ ಮಾನದಂಡದಡಿಯಲ್ಲಿ ಗುರುತಿಸಿ, ಗೌರವಿಸುತ್ತಿರುವುದು ಸ್ತುತ್ಯಾರ್ಹ ಕಾರ್ಯವಾಗಿದೆ. ಭೈರಕದಾರರವರಿಗೆ ಇಡೀ ತಾಲ್ಲೂಕು ಘಟಕ ಒತ್ತಾಸೆಯಾಗಿ ನಿಂತಿರುವುದು ಶ್ಲಾಘನೀಯವಾದುದು ಎಂದರು.
ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ರಾಮದುರ್ಗ ತಾಲ್ಲೂಕು ಅಧ್ಯಕ್ಷ ಬಿ.ಯು. ಭೈರಕದಾರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ನಮ್ಮ ವೇದಿಕೆ ನಿಜವಾದ ಪ್ರತಿಭೆಗಳನ್ನು ಗುರುತಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ಈಗಾಗಲೇ ಚಂದ್ರಯಾನ-೩ ಕಾರ್ಯಕ್ರಮ ಯಶಸ್ವೀಯಾಗಿ ಜರುಗಿದ್ದು ಅಂದು ವಾಚಿಸಿದ ಎಲ್ಲಾ ಕವಿತೆಗಳು ಪುಸ್ತಕ ರೂಪದಲ್ಲಿ ಬರುತ್ತಿದೆ. ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ತಾಲ್ಲೂಕು ಮಟ್ಟದ ಕವಿಗೋಷ್ಠಿ ಯಶಸ್ವೀಯಾಗಿದೆ. ಮುಂಬರುವ ದಿನಗಳಲ್ಲಿ ತಾಲ್ಲೂಕು ಮಟ್ಟದ ಸಮ್ಮೇಳನವನ್ನು ಹಮ್ಮಿಕೊಳ್ಳುವ ಇಚ್ಛೆಯಿದ್ದು ನಮ್ಮ ತಾಲ್ಲೂಕು ಸಮಿತಿ ತುಂಬಾ ಉತ್ಸುಕವಾಗಿದೆ ಎಂದರು.
ಶೈಕ್ಷಣಿಕ ಕ್ಷೇತ್ರದ ಗುಣಾತ್ಮಕ ಸಾಧನೆಯನ್ನು ಪರಿಗಣಿಸಿ ಸಾಧಕರನ್ನು ತಾಲ್ಲೂಕು ಕಮಿಟಿ ಗುರುತಿಸಿತ್ತು. ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ ಮತ್ತು ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪದಾಧಿಕಾರಿಗಳಾದ ಎಂ.ಆರ್.ಮೂಲಿಮನಿ ಸ್ವಾಗತಿಸಿದರು, ಎಸ್.ಎಸ್.ಸಜ್ಜನ ನಿರೂಪಿಸಿದರು, ಎ.ಆಯ್.ಅತ್ತಾರ ವಂದಿಸಿದರು.
ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ತಾಲ್ಲೂಕು ಗೌರವಾಧ್ಯಕ್ಷ ಆಯ್. ಪಿ. ಮುಳ್ಳೂರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂಧರ್ಭದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಧಾರವಾಡ ಜಿಲ್ಲಾಧ್ಯಕ್ಷ ಹಾಗೂ ಸಾಹಿತಿ ಎ. ಎ. ದರ್ಗಾ
, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಬೆಳಗಾವಿ ಜಿಲ್ಲಾಧ್ಯಕ್ಷೆ ಸುಶೀಲಾ ಲ.ಗುರವ crp brp ಶಿಕ್ಷಕರು ಉಪಸ್ಥಿತರಿದ್ದರು.
ವರದಿ-Md ಸೋಹಿಲ್ ಭೈರಕದಾರ ಜೆಕೆ ನ್ಯೂಸ್ ಕನ್ನಡ ರಾಮದುರ್ಗ